- 1 ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
- 2 ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
- 3 ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- 4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
- 5 ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.
- 6 ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- 7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
- 8 ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.
- 9 ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
- 10 ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- 11 ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- 12 ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- 13 ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್ ನದಿಗೆ ಬರಮಾಡಿ ದನು.
- 14 ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
- 15 ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
- 16 ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.
- 17 ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
- 18 ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
- 19 ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.
- 20 ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.
- 21 ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
- 22 ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.
- 23 ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಿದನು.
- 24 ಇಸ್ರಾ ಯೇಲ್ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
Judges 04
- Details
- Parent Category: Old Testament
- Category: Judges
ನ್ಯಾಯಸ್ಥಾಪಕರು ಅಧ್ಯಾಯ 4