- 1 ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
- 2 ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- 3 ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
- 4 ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
- 5 ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- 6 ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- 7 ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
- 8 ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 9 ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- 10 ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
- 11 ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
- 12 ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
- 13 ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
- 14 ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- 15 ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.
- 16 ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
- 17 ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
- 18 ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- 19 ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- 20 ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
- 21 ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
- 22 ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- 23 ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- 24 ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
- 25 ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
- 26 ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
- 27 ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
- 28 ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
- 29 ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.
- 30 ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?
- 31 ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
Judges 05
- Details
- Parent Category: Old Testament
- Category: Judges
ನ್ಯಾಯಸ್ಥಾಪಕರು ಅಧ್ಯಾಯ 5