- 1 ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.
- 2 ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
- 3 ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
- 4 ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
- 5 ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.
- 6 ಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.
- 7 ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
- 8 ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
- 9 ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
- 10 ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ
- 11 ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.
- 12 ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- 13 ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.
- 14 ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
- 15 ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
- 16 ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
- 17 ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ.
- 18 ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
- 19 ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
- 20 ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
- 21 ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.
- 22 ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 23 ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
- 24 ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.
- 25 ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
Judges 07
- Details
- Parent Category: Old Testament
- Category: Judges
ನ್ಯಾಯಸ್ಥಾಪಕರು ಅಧ್ಯಾಯ 7