- 1 ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
- 2 ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- 3 ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
- 4 ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
- 5 ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
- 6 ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
- 7 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
- 8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
- 9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
- 10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
- 11 ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- 12 ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
- 13 ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
- 14 ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
- 15 ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
- 16 ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
- 17 ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- 18 ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- 19 ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
- 20 ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
- 21 ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
- 22 ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
- 23 ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?
- 24 ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
- 25 ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?
- 26 ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?
- 27 ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
- 28 ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.
- 29 ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- 30 ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
- 31 ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- 32 ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.
- 33 ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
- 34 ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
- 35 ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
- 36 ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
- 37 ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
- 38 ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
- 39 ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.
- 40 ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Judges 11
- Details
- Parent Category: Old Testament
- Category: Judges
ನ್ಯಾಯಸ್ಥಾಪಕರು ಅಧ್ಯಾಯ 11