wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಯಾಜಕಕಾಂಡಅಧ್ಯಾಯ 12
  • 1 ಕರ್ತನು ಮೋಶೆಯೊಂದಿಗೆ ಮಾತನಾಡಿ --
  • 2 ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
  • 3 ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
  • 4 ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
  • 5 ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
  • 6 ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
  • 7 ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.
  • 8 ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.