- 1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2 ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
- 3 ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
- 4 ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
- 5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
- 6 ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
- 7 ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
- 8 ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- 9 ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- 10 ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- 11 ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
- 12 ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
- 13 ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- 14 ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
- 15 ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
- 16 ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
- 17 ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
- 18 ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
- 19 ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.
- 20 ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
- 21 ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
- 22 ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- 23 ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
- 24 ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
- 25 ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
- 26 ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
- 27 ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
- 28 ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
- 29 ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
- 30 ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
- 31 ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
- 32 ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
- 33 ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 34 ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
- 35 ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
- 36 ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
- 37 ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
- 38 ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
- 39 ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
- 40 ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
- 41 ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
- 42 ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
- 43 ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
- 44 ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
- 45 ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 46 ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
- 47 ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
- 48 ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.
- 49 ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
- 50 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.
- 51 ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
- 52 ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
- 53 ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
- 54 ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ
- 55 ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ
- 56 ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.
- 57 ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
Leviticus 14
- Details
- Parent Category: Old Testament
- Category: Leviticus
ಯಾಜಕಕಾಂಡ ಅಧ್ಯಾಯ 14