wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಮಲಾಕಿಯಅಧ್ಯಾಯ 1
  • 1 ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.
  • 2 ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
  • 3 ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
  • 4 ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
  • 5 ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
  • 6 ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
  • 7 ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
  • 8 ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
  • 9 ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
  • 10 ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
  • 11 ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  • 12 ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
  • 13 ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.
  • 14 ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.