wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಮಿಕಅಧ್ಯಾಯ 1
  • 1 ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
  • 2 ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
  • 3 ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
  • 4 ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
  • 5 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
  • 6 ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
  • 7 ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
  • 8 ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
  • 9 ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
  • 10 ಗತ್‌ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
  • 11 ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
  • 12 ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
  • 13 ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
  • 14 ಹೀಗಿರುವದರಿಂದ ಮೋರೆಷತ್‌ ಗತ್‌ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
  • 15 ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.
  • 16 ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.