wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಮಿಕಅಧ್ಯಾಯ 5
  • 1 ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
  • 2 ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
  • 3 ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
  • 4 ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
  • 5 ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
  • 6 ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
  • 7 ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
  • 8 ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
  • 9 ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
  • 10 ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
  • 11 ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
  • 12 ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
  • 13 ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
  • 14 ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.
  • 15 ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.