- 1 ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- 2 ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- 3 ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- 4 ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- 5 ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- 6 ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- 7 ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- 8 ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
- 9 ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
- 10 ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- 11 ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
- 12 ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- 13 ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
- 14 ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.
- 15 ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
Nahum 01
- Details
- Parent Category: Old Testament
- Category: Nahum
ನಹೂಮ ಅಧ್ಯಾಯ 1