- 1 ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
- 2 ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
- 3 ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
- 4 ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
- 5 ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
- 6 ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
- 7 ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
- 8 ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
- 9 ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
- 10 ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
- 11 ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
- 12 ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
- 13 ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್,
- 14 ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
- 15 ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
- 16 ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
- 17 ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
- 18 ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
- 19 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
- 20 ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
- 21 ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
- 22 ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
- 23 ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
- 24 ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 25 ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
- 26 ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 27 ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
- 28 ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 29 ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
- 30 ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
- 31 ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
- 32 ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 33 ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
- 34 ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
- 35 ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
- 36 ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 37 ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
- 38 ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 39 ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
- 40 ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 41 ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
- 42 ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 43 ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
- 44 ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
- 45 ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
- 46 ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
- 47 ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
- 48 ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
- 49 ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
- 50 ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- 51 ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- 52 ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
- 53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.
- 54 ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Numbers 01
- Details
- Parent Category: Old Testament
- Category: Numbers
ಅರಣ್ಯಕಾಂಡ ಅಧ್ಯಾಯ 1