- 1 ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--
- 2 ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.
- 3 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ
- 4 ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
- 5 ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
- 6 ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
- 7 ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
- 8 ಪಲ್ಲೂವಿನ ಕುಮಾರರು; ಎಲೀಯಾಬ್.
- 9 ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
- 10 ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- 11 ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- 12 ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
- 13 ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.
- 14 ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
- 15 ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.
- 16 ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;
- 17 ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
- 18 ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
- 19 ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
- 20 ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- 21 ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- 22 ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
- 23 ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
- 24 ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
- 25 ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
- 26 ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
- 27 ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
- 28 ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
- 29 ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
- 30 ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
- 31 ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ;
- 32 ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
- 33 ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- 34 ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
- 35 ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;
- 36 ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.
- 37 ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
- 38 ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
- 39 ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;
- 40 ಬೆಲಗನ ಕುಮಾರರು; ಅರ್ದನೂ ನಾಮಾನನೂ.
- 41 ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.
- 42 ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.
- 43 ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
- 44 ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
- 45 ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
- 46 ಆಶೇರನ ಮಗಳ ಹೆಸರು ಸಾರಳು.
- 47 ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.
- 48 ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;
- 49 ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
- 50 ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
- 51 ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
- 52 ಕರ್ತನು ಮೋಶೆಯ ಸಂಗಡ ಮಾತನಾಡಿ
- 53 ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು.
- 54 ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
- 55 ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
- 56 ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- 57 ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
- 58 ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
- 59 ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
- 60 ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು.
- 61 ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
- 62 ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
- 63 ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
- 64 ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.
- 65 ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
Numbers 26
- Details
- Parent Category: Old Testament
- Category: Numbers
ಅರಣ್ಯಕಾಂಡ ಅಧ್ಯಾಯ 26