- 1 ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- 2 ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--
- 3 ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- 4 ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- 5 ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
- 6 ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
- 7 ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?
- 8 ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
- 9 ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
- 10 ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--
- 11 ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- 12 ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
- 13 ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- 14 ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
- 15 ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
- 16 ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
- 17 ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
- 18 ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
- 19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
- 20 ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
- 21 ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
- 22 ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
- 23 ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- 24 ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
- 25 ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
- 26 ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
- 27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.
- 28 ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
- 29 ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
- 30 ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
- 31 ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
- 32 ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
- 33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
- 34 ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- 35 ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
- 36 ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
- 37 ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- 38 ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- 39 ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
- 40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
- 41 ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.
- 42 ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Numbers 32
- Details
- Parent Category: Old Testament
- Category: Numbers
ಅರಣ್ಯಕಾಂಡ ಅಧ್ಯಾಯ 32