- 1 ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- 2 ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
- 3 ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
- 4 ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- 5 ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- 6 ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- 7 ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- 8 ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- 9 ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- 10 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- 11 ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- 12 ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
- 13 ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
- 14 ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
- 15 ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- 16 ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- 17 ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- 18 ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
- 19 ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- 20 ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
- 21 ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.
- 22 ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Proverbs 02
- Details
- Parent Category: Old Testament
- Category: Proverbs
ಙ್ಞಾನೋಕ್ತಿಗಳು ಅಧ್ಯಾಯ 2