- 1 ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
- 2 ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- 3 ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- 4 ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
- 5 ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
- 6 ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
- 7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
- 8 ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- 9 ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- 10 ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- 11 ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
- 12 ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
- 13 ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- 14 ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
- 15 ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- 16 ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
- 17 ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
- 18 ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
- 19 ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
- 20 ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
- 21 ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
- 22 ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
- 23 ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
- 24 ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
- 25 ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
- 26 ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
- 27 ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- 28 ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.
- 29 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
Proverbs 22
- Details
- Parent Category: Old Testament
- Category: Proverbs
ಙ್ಞಾನೋಕ್ತಿಗಳು ಅಧ್ಯಾಯ 22