wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಙ್ಞಾನೋಕ್ತಿಗಳುಅಧ್ಯಾಯ 26
  • 1 ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
  • 2 ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
  • 3 ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
  • 4 ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
  • 5 ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
  • 6 ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
  • 7 ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
  • 8 ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
  • 9 ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
  • 10 ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
  • 11 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
  • 12 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
  • 13 ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
  • 14 ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.
  • 15 ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
  • 16 ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
  • 17 ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
  • 18 ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
  • 19 ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
  • 20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
  • 21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
  • 22 ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
  • 23 ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
  • 24 ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
  • 25 ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
  • 26 ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
  • 27 ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.
  • 28 ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.