- 1 ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
- 2 ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
- 3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
- 4 ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- 5 ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- 6 ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- 7 ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
- 8 ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
- 9 ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- 10 ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
- 11 ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- 12 ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
- 13 ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- 14 ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- 15 ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
- 16 ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
- 17 ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- 18 ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
- 19 ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
- 20 ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- 21 ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
- 22 ಆಳುವ ದಾಸನು, ಹೊಟ್ಟೆತುಂಬಿದ ನೀಚನು,
- 23 ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
- 24 ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.
- 25 ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
- 26 ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
- 27 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
- 28 ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.
- 29 ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
- 30 ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.
- 31 ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
- 32 ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.
- 33 ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
Proverbs 30
- Details
- Parent Category: Old Testament
- Category: Proverbs
ಙ್ಞಾನೋಕ್ತಿಗಳು ಅಧ್ಯಾಯ 30