wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 2
  • 1 ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
  • 2 ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
  • 3 ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
  • 4 ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
  • 5 ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
  • 6 ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
  • 7 ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
  • 8 ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
  • 9 ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
  • 10 ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
  • 11 ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.
  • 12 ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.