wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 5
  • 1 ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
  • 2 ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
  • 3 ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
  • 4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
  • 5 ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
  • 6 ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
  • 7 ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
  • 8 ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
  • 9 ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
  • 10 ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
  • 11 ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.
  • 12 ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳು