wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 21
  • 1 ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
  • 2 ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
  • 3 ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
  • 4 ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
  • 5 ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
  • 6 ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
  • 7 ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
  • 8 ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
  • 9 ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
  • 10 ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
  • 11 ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
  • 12 ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.
  • 13 ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.