- 1 ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
- 2 ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- 3 ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
- 4 ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
- 5 ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
- 6 ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
- 7 ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
- 8 ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
- 9 ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- 10 ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.
- 11 ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Psalms 029
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 29