wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 32
  • 1 ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
  • 2 ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
  • 3 ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
  • 4 ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
  • 5 ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
  • 6 ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
  • 7 ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
  • 8 ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
  • 9 ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
  • 10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.
  • 11 ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.