wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 38
  • 1 ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
  • 2 ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
  • 3 ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
  • 4 ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
  • 5 ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
  • 6 ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
  • 7 ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
  • 8 ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
  • 9 ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
  • 10 ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
  • 11 ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
  • 12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
  • 13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
  • 14 ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
  • 15 ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
  • 16 ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
  • 17 ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
  • 18 ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
  • 19 ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
  • 20 ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
  • 21 ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ.
  • 22 ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.