- 1 ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- 2 ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- 3 ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
- 4 ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.
- 5 ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
Psalms 043
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 43