- 1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- 2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- 3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- 4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
- 5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
- 6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- 7 ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- 8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
- 9 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
- 10 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
- 11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- 12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
- 13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.
- 14 ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Psalms 048
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 48