wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 50
  • 1 ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
  • 2 ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
  • 3 ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
  • 4 ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
  • 5 ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
  • 6 ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
  • 7 ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
  • 8 ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
  • 9 ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
  • 10 ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
  • 11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
  • 12 ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
  • 13 ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
  • 14 ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
  • 15 ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
  • 16 ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
  • 17 ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
  • 18 ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
  • 19 ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
  • 20 ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
  • 21 ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
  • 22 ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.
  • 23 ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.