wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 62
  • 1 ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
  • 2 ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
  • 3 ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
  • 4 ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
  • 5 ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
  • 6 ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
  • 7 ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
  • 8 ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
  • 9 ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
  • 10 ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
  • 11 ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.
  • 12 ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.