- 1 ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- 2 ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
- 3 ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- 4 ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- 5 ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- 6 ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- 7 ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
- 8 ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
- 9 ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- 10 ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- 11 ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- 12 ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.
- 13 ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
Psalms 079
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 79