- 1 ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
- 2 ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- 3 ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
- 4 ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
- 5 ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
- 6 ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.
- 7 ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
Psalms 087
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 87