wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 96
  • 1 ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
  • 2 ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
  • 3 ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
  • 4 ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
  • 5 ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
  • 6 ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
  • 7 ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
  • 8 ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
  • 9 ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
  • 10 ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
  • 11 ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
  • 12 ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.
  • 13 ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.