wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 97
  • 1 ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
  • 2 ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
  • 3 ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
  • 4 ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
  • 5 ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
  • 6 ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
  • 7 ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
  • 8 ಚೀಯೋನ್‌ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
  • 9 ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
  • 10 ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
  • 11 ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.
  • 12 ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.