- 1 ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
- 2 ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- 3 ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- 4 ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- 5 ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
- 6 ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
- 7 ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
- 8 ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
- 9 ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
- 10 ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- 11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- 12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
- 13 ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- 14 ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- 15 ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
- 16 ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- 17 ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- 18 ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
- 19 ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
- 20 ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- 21 ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.
- 22 ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
Psalms 103
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 103