- 1 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- 2 ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- 3 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
- 4 ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
- 5 ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
- 6 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- 7 ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- 8 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- 9 ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- 10 ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- 11 ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
- 12 ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
- 13 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- 14 ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- 15 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- 16 ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- 17 ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 18 ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- 19 ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- 20 ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- 21 ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
- 22 ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- 23 ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
- 24 ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
- 25 ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- 26 ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
- 27 ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- 28 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- 29 ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- 30 ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- 31 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
- 32 ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
- 33 ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
- 34 ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- 35 ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
- 36 ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
- 37 ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
- 38 ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- 39 ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
- 40 ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- 41 ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
- 42 ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.
- 43 ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
Psalms 107
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 107