wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 110
  • 1 ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
  • 2 ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
  • 3 ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
  • 4 ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
  • 5 ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
  • 6 ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.
  • 7 ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.