- 1 ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- 2 ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 3 ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- 4 ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- 5 ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
- 6 ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- 7 ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- 8 ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- 9 ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- 10 ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
- 11 ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- 12 ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 13 ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 14 ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- 15 ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
- 16 ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- 17 ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- 18 ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,
- 19 ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Psalms 116
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 116