- 1 ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- 2 ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- 3 ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- 4 ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- 5 ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.
- 6 ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Psalms 128
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 128