wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಕೀರ್ತನೆಗಳುಅಧ್ಯಾಯ 147
  • 1 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
  • 2 ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
  • 3 ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
  • 4 ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
  • 5 ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
  • 6 ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
  • 7 ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
  • 8 ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
  • 9 ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
  • 10 ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
  • 11 ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
  • 12 ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
  • 13 ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
  • 14 ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
  • 15 ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
  • 16 ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
  • 17 ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
  • 18 ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
  • 19 ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.
  • 20 ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.