- 1 ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
- 2 ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
- 3 ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
- 4 ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
- 5 ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- 6 ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- 7 ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
- 8 ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- 9 ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
- 10 ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
- 11 ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
- 12 ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
- 13 ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.
- 14 ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
Psalms 148
- Details
- Parent Category: Old Testament
- Category: Psalms
ಕೀರ್ತನೆಗಳು ಅಧ್ಯಾಯ 148