- 1 ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
- 2 ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- 3 ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- 4 ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
- 5 ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ.
- 6 ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.
- 7 ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
- 8 ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
- 9 ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- 10 ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- 11 ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- 12 ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್‌ನ ರಥಗಳ ಹಾಗೆ ಮಾಡಿತು.
- 13 ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Song Of Solomon 06
- Details
- Parent Category: Old Testament
- Category: Song of Songs
ಪರಮ ಗೀತ ಅಧ್ಯಾಯ 6