wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


ಜೆಕರ್ಯಅಧ್ಯಾಯ 8
  • 1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
  • 2 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
  • 3 ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
  • 4 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
  • 5 ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
  • 6 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  • 7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
  • 8 ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
  • 9 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
  • 10 ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
  • 11 ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  • 12 ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
  • 13 ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
  • 14 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
  • 15 ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
  • 16 ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
  • 17 ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
  • 18 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
  • 19 ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
  • 20 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
  • 21 ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
  • 22 ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.
  • 23 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.