- 1 ಇಗೋ, ಕರ್ತನ ದಿನವು ಬರುತ್ತದೆ.
- 2 ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- 3 ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- 4 ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- 5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- 6 ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
- 7 ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
- 8 ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
- 9 ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- 10 ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- 11 ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
- 12 ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
- 13 ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
- 14 ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
- 15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.
- 16 ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
- 17 ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
- 18 ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
- 19 ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- 20 ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.
- 21 ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Zechariah 14
- Details
- Parent Category: Old Testament
- Category: Zechariah
ಜೆಕರ್ಯ ಅಧ್ಯಾಯ 14