- 1 ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
- 2 ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
- 3 ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- 4 ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
- 5 ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 6 ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- 7 ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
- 8 ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
- 9 ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
- 10 ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
- 11 ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
- 12 ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
- 13 ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
- 14 ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
- 15 ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- 16 ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
- 17 ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.
- 18 ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
Zephaniah 01
- Details
- Parent Category: Old Testament
- Category: Zephaniah
ಚೆಫನ್ಯ ಅಧ್ಯಾಯ 1