00:00/00:00
- 1 ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
- 2 ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
- 3 ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
- 4 ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- 5 ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- 6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- 7 ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
- 8 ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.
- 9 ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- 10 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 11 ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 12 ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 13 ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 14 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
- 15 ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- 16 ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- 17 ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- 18 ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 19 ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- 20 ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.
- 21 ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.